ಮನೆ ರಾಜಕೀಯ ಶೇ.40 ರಷ್ಟು ಕಮೀಷನ್ ಆರೋಪ ಮಾಡಿದ್ದ ಸಂತೋಷ್ ಪಾಟೀಲ ಆತ್ಮಹತ್ಯೆ

ಶೇ.40 ರಷ್ಟು ಕಮೀಷನ್ ಆರೋಪ ಮಾಡಿದ್ದ ಸಂತೋಷ್ ಪಾಟೀಲ ಆತ್ಮಹತ್ಯೆ

0

ಬೆಳಗಾವಿ: ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಈಚೆಗೆ ಶೇ 40ರಷ್ಟು ಕಮಿಷನ್ ಆರೋಪ ಮಾಡಿ ಸುದ್ದಿಯಾಗಿದ್ದ ತಾಲ್ಲೂಕಿನ‌ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಸಂತೋಷ್ ಪಾಟೀಲ‌ ವಾಟ್ಸ್ಆ್ಯಪ್‌ನಲ್ಲಿ ಸಂದೇಶ ಕಳುಹಿಸಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ  ಸಂತೋಷ್ ಪಾಟೀಲ್ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಆತ್ಮಹತ್ಯೆ ಸಂದೇಶ: ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಕಾರಣ’ ಎಂದು ಉಲ್ಲೇಖಿಸಿರುವ ಅವರು, ಸಚಿವರಿಗೆ ಶಿಕ್ಷೆಯಾಗಬೇಕು. ನನ್ನೆಲ್ಲ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ, ಮಕ್ಕಳಿಗೆ ಪ್ರಧಾನಿ, ಮುಖ್ಯಮಂತ್ರಿ , ಬಿ.ಎಸ್. ಯಡಿಯೂರಪ್ಪ ಸಹಾಯ ಮಾಡಬೇಕು’ ಎಂದು ಬರೆದಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಾಟ್ಸಪ್ ಸಂದೇಶ

ಈ ವಿಚಾರ ತಿಳಿದು ಪೊಲೀಸರು ಸಂತೋಷ ಅವರ ಹುಡುಕಾಟದಲ್ಲಿ ತೊಡಗಿದ್ದರು.

ತಮ್ಮ‌ ವಿರುದ್ಧದ ಆರೋಪವನ್ನು ತಳ್ಳಿ ಹಾಕಿದ್ದ ಸಚಿವ ಈಶ್ವರಪ್ಪ ಅವರು, ಸಂತೋಷ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದರು.