ಮನೆ ರಾಜಕೀಯ ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತು ವಿವಾದಾತ್ಮಕ ಹೇಳಿಕೆ: ಕಾಂಗ್ರೆಸ್ ನಾಯಕ ಉದಿತ್ ರಾಜ್’ಗೆ ಮಹಿಳಾ ಆಯೋಗ...

ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತು ವಿವಾದಾತ್ಮಕ ಹೇಳಿಕೆ: ಕಾಂಗ್ರೆಸ್ ನಾಯಕ ಉದಿತ್ ರಾಜ್’ಗೆ ಮಹಿಳಾ ಆಯೋಗ ನೋಟಿಸ್

0

ನವದೆಹಲಿ(Newdelhi): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ಉದಿತ್ ರಾಜ್ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಮಾತನಾಡಿರುವ ಎನ್‌ಸಿಡಬ್ಲ್ಯು ಅಧ್ಯಕ್ಷೆ ರೇಖಾ ಶರ್ಮಾ, ಉದಿತ್ ರಾಜ್ ಅವರ ಹೇಳಿಕೆ ಕೇವಲ ಮಹಿಳೆಯ ವಿರುದ್ಧ ಮಾತ್ರವಲ್ಲದೆ ಸಾಂವಿಧಾನಿಕ ಮುಖ್ಯಸ್ಥರ (ರಾಷ್ಟ್ರಪತಿ) ವಿರುದ್ಧವಾಗಿದೆ. ಮಹಿಳೆ ಎಂಬ ಕಾರಣಕ್ಕೆ ಆಕೆಯನ್ನು (ದ್ರೌಪದಿ ಮುರ್ಮು) ಟಾರ್ಗೆಟ್ ಮಾಡಲಾಗಿದೆಯೇ ? ಎಂದು ರೇಖಾ ಶರ್ಮಾ ಪ್ರಶ್ನಿಸಿದ್ದಾರೆ.

ಉದಿತ್ ರಾಜ್ ನೀಡಿರುವ ಹೇಳಿಕೆ ಖಂಡನೀಯ ಮತ್ತು ಅವಹೇಳನಕಾರಿ ಭಾಷೆ ಬಳಸಿರುವುದು ನಾಚಿಕೆಗೇಡಿನ ಸಂಗತಿಯಾಗಿದ್ದು, ನೋಟಿಸ್ ಜಾರಿ ಮಾಡಲಾಗಿದೆ ಎಂದು ರೇಖಾ ಶರ್ಮಾ ತಿಳಿಸಿದ್ದಾರೆ.

ದ್ರೌಪದಿ ಮುರ್ಮು ಅವರಂತಹ ರಾಷ್ಟ್ರಪತಿ ಯಾವ ದೇಶಕ್ಕೂ ಸಿಗಬಾರದು. ಚಮಚಾಗಿರಿ ಮಾಡುವುದಕ್ಕೂ ಒಂದು ಮಿತಿಯಿದೆ. ಶೇ 70ರಷ್ಟು ಜನರು ಗುಜರಾತ್ ಉಪ್ಪನ್ನು ತಿನ್ನುತ್ತಾರೆ ಎಂದು ಹೇಳಲಾಗುತ್ತದೆ. ಉಪ್ಪು ತಿಂದು ಇಲ್ಲಿಯೇ ಜೀವನ ನಡೆಸಿದರೆ ನಮ್ಮ ಜನರ ಸಮಸ್ಯೆ ಗೊತ್ತಾಗುತ್ತದೆ ಎಂದು ಉದಿತ್ ರಾಜ್ ಟ್ವೀಟ್ ಮಾಡಿದ್ದಾರೆ.

ಟ್ವೀಟ್ ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಉದಿತ್ ರಾಜ್ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಈ ಬೆಳವಣಿಗೆಗಳ ನಡುವೆ ರಾಜ್ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿಕೊಂಡಿದ್ದಾರೆ.