ಮನೆ ಅಪರಾಧ ನಿವೇಶನ ಜಾಗದ ವಿಚಾರಕ್ಕೆ ಗಲಾಟೆ: ವ್ಯಕ್ತಿಯ ಬರ್ಬರ ಕೊಲೆ

ನಿವೇಶನ ಜಾಗದ ವಿಚಾರಕ್ಕೆ ಗಲಾಟೆ: ವ್ಯಕ್ತಿಯ ಬರ್ಬರ ಕೊಲೆ

0

ಆನೇಕಲ್: ನಿವೇಶನ ಜಾಗದ ವಿಚಾರಕ್ಕೆ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿಯಲ್ಲಿ ನಡೆದಿದೆ.

ಹೆಬ್ಬಗೋಡಿಯ ರಮೇಶ್ ಎಂಬಾತನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ದುಷ್ಕರ್ಮಿಗಳು ವ್ಯಕ್ತಿಯನ್ನ ಕೊಚ್ಚಿ ಕೊಲೆ ಮಾಡುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಮೇಶ್ ಮನೆಯ ಎದುರು ಮನೆಯವರು ಕೊಲೆ ಮಾಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.

ಹೆಬ್ಬಗೋಡಿಯಲ್ಲಿ ಮನೆ ಕಟ್ಟುವ ವಿಚಾರಕ್ಕೆ ಮೃತ ರಮೇಶ್​ ಹಾಗೂ ಕೊಲೆ ಆರೋಪಿಗಳ ನಡುವೆ ಗಲಾಟೆ ನಡೆಯುತ್ತಿತ್ತು. ಸರ್ಕಾರದಿಂದ ನೀಡಲಾಗಿದ್ದ ಜಾಗದಲ್ಲಿ ರಮೇಶ್ ನಿನ್ನೆ ಮನೆಗೆ ಅಡಿಪಾಯ ಹಾಕಿದ್ದರು. ಇದೇ ಜಾಗವನ್ನು ಜಗದೀಶ್​​ ನನಗೆ ಸೇರಬೇಕು ಎಂದು ಆಗಾಗ ಗಲಾಟೆ ಮಾಡಿದ್ದ.

ಹೆಬ್ಬಗೋಡಿ ನಗರಸಭೆಯಿಂದ ಈ ಜಾಗ ರಮೇಶ್ ​ಗೆ ಸೇರಿದ್ದು ಎಂದು ದಾಖಲೆ ನೀಡಲಾಗಿತ್ತು. ಇದೇ ವಿಚಾರಕ್ಕೆ ರಾತ್ರಿ 10.30 ರ ಸಮಯದಲ್ಲಿ ಏಕಾಏಕಿ ಮಾರಕಾಸ್ತ್ರಗಳನ್ನ ಹಿಡಿದು ಬಂದ ದುಷ್ಕರ್ಮಿಗಳು, ನಿರ್ಮಾಣ ಹಂತದ ನಿವೇಶನದ ಜಾಗದಲ್ಲಿಯೇ ರಮೇಶ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ದುಷ್ಕರ್ಮಿಗಳ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿದೆ.

ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಹಿಂದಿನ ಲೇಖನಹೆಚ್‌.ಡಿ.ರೇವಣ್ಣ ಅವರಿಗೆ ಸಮನ್ಸ್‌ ಜಾರಿ ಮಾಡುವಂತೆ ಹೈಕೋರ್ಟ್ ಆದೇಶ
ಮುಂದಿನ ಲೇಖನಮಾಂಸಕ್ಕಾಗಿ 8 ಬಾವಲಿಗಳನ್ನು ಕೊಂದಿದ್ದ ನಾಲ್ವರ ಬಂಧನ