ದಾವಣಗೆರೆ: ತನ್ನ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ಅಪರಾಧಿ ತಂದೆಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಎಫ್ ಟಿಎಸ್ ಪಿ (ಪೋಕ್ಸೋ ಕೋರ್ಟ) ತೀರ್ಪು ನೀಡಿದೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ನಿವಾಸಿ ಶಿಕ್ಷೆಗೊಳಗಾದ ಪಾಪಿ ತಂದೆ. ಈ ಅಪರಾಧಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ತಗಡಿನ ಶೀಟ್ ಮನೆಯಲ್ಲಿ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದ. ಬಟ್ಟೆ ಹಾಗೂ ತಿಂಡಿ ಕೊಡುತ್ತಾ ಮಗಳ ಮೇಲೆ ಅತ್ಯಾಚಾರ ಮಾಡುತ್ತಿದ್ದ. ವಿಚಾರ ತಿಳಿದ ನಂತರ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಶ್ರೀಪಾದ ಎನ್, ಆರೋಪಿ ತಂದೆಗೆ 20 ವರ್ಷ ಜೈಲು ಶಿಕ್ಷೆ, 12 ಸಾವಿರ ದಂಡ ಹಾಗೂ ಸಂತ್ರಸ್ತೆಗೆ ಸರ್ಕಾರದಿಂದ ಐದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ.
ಸರ್ಕಾರಿ ಅಭಿಯೋಜಕಿ ಸುನಂದಾ ಮಡಿವಾಳರ ಸಾಕ್ಷಿಗಳ ವಿಚಾರಣೆ ಮಾಡಿದ್ರೆ, ಕೆಜಿ ಜಯಪ್ಪ ಸಂತ್ರಸ್ಥೆ ಪರ ವಾದ ಮಂಡನೆ ಮಾಡಿದರು.