Saval TV on YouTube
ಮಂಗಳೂರು(Mangalore): ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್’ನನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ.
ಬಾಂಬ್ ಸ್ಫೋಟದಿಂದ ಗಾಯಗೊಂಡಿದ್ದ ಶಾರಿಕ್ಗೆ ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆತನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಆತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್’ಐಎ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.
ಆಸ್ಪತ್ರೆಯ ವೈದ್ಯರ ಶಿಫಾರಸಿನ ಮೇರೆಗೆ ಶಾರಿಕ್’ನನ್ನು ಶನಿವಾರ ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು.