ಬೆಂಗಳೂರು: ಸಹಕಾರ ಸಂಘಗಳ ಕಾಯ್ದೆಯ ತಿದ್ದುಪಡಿ ಸೆಕ್ಷನ್ 128A ಪ್ರಕಾರ ಸಂವಿಧಾನಬಾಹಿರ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ.
ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಮೂಲಕ ಪ್ರಮುಖ ಸಹಕಾರ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿ ಮೀಸಲಾತಿ ಆಧಾರದ ಮೇಲೆ ಸರ್ಕಾರದ ನಾಮನಿರ್ದೇಶಿತರ ಸಂಖ್ಯೆಯನ್ನು ಮೂರಕ್ಕೆ ಹೆಚ್ಚಿಸುವ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ಮಸೂದೆಯನ್ನು ಸಿದ್ದರಾಮಯ್ಯ ಸರ್ಕಾರ ಅಂಗೀಕರಿಸಿತ್ತು. ಆದ್ರೆ, ಇದೀಗ ಇದನ್ನು ಸಂವಿಧಾನಬಾಹಿರ. ತಿದ್ದುಪಡಿ ಸಂವಿಧಾನದ ಆರ್ಟಿಕಲ್ 19(1)ಸಿ ಉಲ್ಲಂಘನೆ ಎಂದು ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗಡೆ ಅವರಿದ್ದ ಹೈಕೋರ್ಟ್ ಪೀಠ ತೀರ್ಪು ಪ್ರಕಟಿಸಿದೆ.