ನವದೆಹಲಿ(New Delhi): ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ(Corona) ಪ್ರಕರಣ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದ್ದು, ಕೇವಲ 861 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 6 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,36,132ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,21,691ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,058ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 929 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,03,383ಕ್ಕೆ ತಲುಪಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,85,74,18,827 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.