ನವದೆಹಲಿ (New Delhi)- ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ಪತ್ರ ಬರೆದಿದೆ.
ತಮಿಳುನಾಡು, ಕೇರಳ, ತೆಲಂಗಾಣ, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳಿಗೆ ಪತ್ರ ಬರೆದು ಸ್ಥಳೀಯವಾಗಿ ಸೋಂಕು ಹರಡುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.
ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಇದುವರೆಗೆಗಳಿಸಿದ ಲಾಭಗಳನ್ನು ಕಳೆದುಕೊಳ್ಳದೆ ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆಗಳ ಮೇಲೆ ಅಪಾಯದ ಮೌಲ್ಯಮಾಪನ ಆಧಾರಿತ ವಿಧಾನವನ್ನು ಅನುಸರಿಸುವ ಅವಶ್ಯಕತೆ ಇದೆ. ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸಲು ಅಗತ್ಯವಿದ್ದಲ್ಲಿ ರಾಜ್ಯವು ಕಟ್ಟುನಿಟ್ಟಾದ ನಿಗಾ ವಹಿಸಬೇಕು ಮತ್ತು ಪೂರ್ವಭಾವಿಯಾಗಿ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ ಎಂದು ರಾಜೇಶ್ ಭೂಷಣ್ ಹೇಳಿದ್ದಾರೆ.
ಈ ಸಾಮೂಹಿಕ ಪ್ರಯತ್ನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅದಕ್ಕೆ ಅಗತ್ಯವಿರುವ ಬೆಂಬಲವನ್ನು ಮುಂದುವರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.