ನವದೆಹಲಿ (New Delhi)-ದೇಶದಲ್ಲಿ ಕೊರೊನಾ ಸೋಂಕು (CoronaVirus) ಮತ್ತೆ ಹೆಚ್ಚಳವಾಗುತ್ತಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,593 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.
ಆ ಮೂಲಕ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,57,545ಕ್ಕೆ ಏರಿಕೆಯಾಗಿದೆ. 44 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,22,193ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 1,755 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,19,479ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 15,873 ಇದೆ.
ಭಾರತದಲ್ಲಿ ಒಂದೇ 4,55,179 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 83,42,81,170 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,87,67,20,318 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.