ಮನೆ ರಾಷ್ಟ್ರೀಯ ದೇಶದಲ್ಲಿ ಕೊರೊನಾ ಹೆಚ್ಚಳ: 2,593 ಹೊಸ ಕೇಸ್‌ ಪತ್ತೆ

ದೇಶದಲ್ಲಿ ಕೊರೊನಾ ಹೆಚ್ಚಳ: 2,593 ಹೊಸ ಕೇಸ್‌ ಪತ್ತೆ

0

ನವದೆಹಲಿ (New Delhi)-ದೇಶದಲ್ಲಿ ಕೊರೊನಾ ಸೋಂಕು (CoronaVirus) ಮತ್ತೆ ಹೆಚ್ಚಳವಾಗುತ್ತಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,593 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.

ಆ ಮೂಲಕ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,57,545ಕ್ಕೆ ಏರಿಕೆಯಾಗಿದೆ. 44 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,22,193ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,755 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,19,479ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 15,873 ಇದೆ.

ಭಾರತದಲ್ಲಿ ಒಂದೇ 4,55,179 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 83,42,81,170 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,87,67,20,318 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಹಿಂದಿನ ಲೇಖನಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಭೇಟಿ ನಡುವೆ ರ್ಯಾಲಿ ಸ್ಥಳದಿಂದ 12 ಕಿಮೀ ದೂರದಲ್ಲಿ ಸ್ಫೋಟ
ಮುಂದಿನ ಲೇಖನಜಮ್ಮು-ಕಾಶ್ಮೀರದಲ್ಲಿ ಎನ್‌ ಕೌಂಟರ್:‌ ಇಬ್ಬರು ಉಗ್ರರ ಹತ್ಯೆ