ಬೆಂಗಳೂರು (Bengaluru)- ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 122 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,50,004ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 40064ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
162 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,08137ಕ್ಕೆ ಏರಿಕೆಯಾಗಿದೆ. ಇನ್ನು 1761 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 112 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,85,750ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ.