ಮನೆ ರಾಜ್ಯ ರಾಜ್ಯದಲ್ಲಿ 167 ಮಂದಿಗೆ ಕೊರೊನಾ ಪಾಸಿಟಿವ್‌

ರಾಜ್ಯದಲ್ಲಿ 167 ಮಂದಿಗೆ ಕೊರೊನಾ ಪಾಸಿಟಿವ್‌

0

ಬೆಂಗಳೂರು (Bengaluru)- ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 167 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,50,545ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,064 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

101 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,08,718ಕ್ಕೆ ಏರಿಕೆಯಾಗಿದೆ. ಇನ್ನು 1,721 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 161 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,86,266ಕ್ಕೆ ಏರಿಕೆಯಾಗಿದೆ.