ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,499 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 255 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,29,05,544 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,13,481 ಮಂದಿ ಸಾವಿಗೀಡಾಗಿದ್ದಾರೆ. ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೆ 4,22,70,482 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,21,881 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಪಾಸಿಟಿವಿಟಿ ದರ ಶೇ 1.01 ರಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಮಾಹಿತಿಯಿಂದ ತಿಳಿದುಬಂದಿದೆ. ದೇಶದಲ್ಲಿ ಇದುವರೆಗೆ 1,77,17,68,379 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ.















