ಮನೆ ಆರೋಗ್ಯ ಕೊರೊನಾ: 1660 ಹೊಸ ಕೇಸ್ ಪತ್ತೆ

ಕೊರೊನಾ: 1660 ಹೊಸ ಕೇಸ್ ಪತ್ತೆ

0

ನವದೆಹಲಿ: ದೇಶದಲ್ಲಿ ಒಂದೇ ದಿನ 1,660 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 16,741ಕ್ಕೆ ಇಳಿಕೆಯಾಗಿದೆ.

ಕಳೆದ 24 ಗಂಟೆಗ ಅವಧಿಯಲ್ಲಿ 82 ಸೋಂಕಿತರು ಸಾವಿಗೀಡಾಗಿದ್ದಾರೆ. ಇಲ್ಲಿಯವರೆಗೂ ಕೋವಿಡ್‌ನಿಂದ 5,16,757 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಸೋಂಕಿತರ ಒಟ್ಟು ಸಂಖ್ಯೆ 4,30,16,397ಕ್ಕೆ ಏರಿಕೆಯಾಗಿದೆ. ಕೇರಳ ಹಾಗೂ ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳು ಕೋವಿಡ್‌ನಿಂದ ಮೃತಪಟ್ಟವರ ಹಿಂದಿನ ಸಂಖ್ಯೆಯ ವರದಿ ನೀಡಿವೆ.

4200 ಜನರು ಮೃತಪಟ್ಟಿರುವುದು ವರದಿಯಾಗಿದೆ. ನಿನ್ನೆಯವರೆಗೂ ದೇಶದಲ್ಲಿ 182.87 ಕೋಟಿ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ.

ಹಿಂದಿನ ಲೇಖನಸ್ವಾಮೀಜಿಗಳಿಗೆ ಅಗೌರವ ತೋರಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ಮುಂದಿನ ಲೇಖನಪೋಷಕರನ್ನು ಕೊಲೆಗೈದ ಮಾನಸಿಕ ಅಸ್ವಸ್ಥ ಮಗ