ನವದೆಹಲಿ (New Delhi)-ಭಾರತದಲ್ಲಿ ಮಹಾಮಾರಿ ಕೊರೊನಾ ಸೋಂಕು ಏರಿಳಿಕೆ ಮುಂದುವರೆದಿದೆ. ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 2,487 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,21,599ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,214ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17,692ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 2,878 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,79,693ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 4,86,963 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 84,34,31,758 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,91,15,90,370 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.