ಮನೆ ಆರೋಗ್ಯ ಮಾ.16 ರಿಂದ 12-14 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ಅಭಿಯಾನ

ಮಾ.16 ರಿಂದ 12-14 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ಅಭಿಯಾನ

0

ನವದೆಹಲಿಮಾರ್ಚ್ 16ರಿಂದ 12-14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಅಭಿಯಾನ ಪ್ರಾರಂಭಿಸಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಹೇಳಿದ್ದಾರೆ. 

ಈ ಮಾಹಿತಿ ಟ್ವೀಟ್ ಮಾಡಿರುವ ಅವರು, ಮಾ.16 ರಿಂದ 12-13, 13-14 ವರ್ಷಗಳ ಮಕ್ಕಳಿಗೆ ಲಸಿಕೆ ಅಭಿಯಾನ ಪ್ರಾರಂಭವಾಗಲಿದೆ. ಇದರೊಂದಿಗೆ 60 ವರ್ಷಗಳ ಮೇಲ್ಪಟ್ಟ ಮಂದಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಲಸಿಕೆ ಡೋಸ್ ಗಳನ್ನು ನೀಡಲಾಗುತ್ತದೆ ಎಂದಿದ್ದಾರೆ. 

ಮಕ್ಕಳು ಸುರಕ್ಷಿತರಾಗಿದ್ದರೆ ದೇಶವೂ ಸುರಕ್ಷಿತವಾಗಿರಲಿದೆ. ಮಾ.16 ರಿಂದ 12-13 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಅಭಿಯಾನವನ್ನು ಘೋಷಿಸಲು ಸಂತಸವಾಗುತ್ತಿದೆ. ಮಕ್ಕಳಿಗೆ ಲಸಿಕೆ ಕೊಡಿಸಲು ಪೋಷಕರಲ್ಲಿ ಮನವಿ ಮಾಡುತ್ತೇನೆ ಹಾಗೂ 60 ವರ್ಷದ ಮೇಲ್ಪಟ್ಟವರು ಮುನ್ನೆಚ್ಚರಿಕಾ ಕ್ರಮವಾಗಿ ಲಸಿಕೆ ಪಡೆಯಲು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. 

ಇನ್ನು ಇದೇ ವೇಳೆ 60 ವರ್ಷಕ್ಕೂ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಲಸಿಕೆ ತೆಗೆದುಕೊಳ್ಳುವುದಕ್ಕೆ ವಿಧಿಸಲಾಗಿದ್ದ ಬಹುವಿಧದ ಆರೋಗ್ಯ ಸಮಸ್ಯೆಗೆ ಸಂಬಂಧಿಸಿದ ಷರತ್ತನ್ನು ತೆಗೆಯಲಾಗಿದೆ.