ಮನೆ ಅಪರಾಧ ಭ್ರಷ್ಟಚಾರ ಆರೋಪ: ರವಿ ಡಿ ಚನ್ನಣ್ಣನವರ್ ಸ್ಪಷ್ಟನೆ

ಭ್ರಷ್ಟಚಾರ ಆರೋಪ: ರವಿ ಡಿ ಚನ್ನಣ್ಣನವರ್ ಸ್ಪಷ್ಟನೆ

0

ಬೆಂಗಳೂರು: ತಮ್ಮ ಮೇಲೆ ಕೇಳಿಬಂಧ ಭ್ರಷ್ಟಚಾರ ಆರೋಪದ ಕುರಿತು ಮೊದಲ ಬಾರಿಗೆ ಪ್ರತಿಕ್ರಯಿಸಿರುವ ಐಪಿಎಸ್ ಅಧಿಕಾರಿ ರವಿ.ಡಿ ಚನ್ನಣ್ಣನವರ್,  ನನ್ನ ಮೇಲೆ ಬಂದಿರುವ ಆರೋಪಗಳು ಶುದ್ದ ಸುಳ್ಳು. ನನ್ನ ವಿರುದ್ಧ ತೇಜೋವಧೆ ಮಾಡಿದವರ ಕಾನೂನು ಹೋರಾಟ ನಡೆಸುತ್ತಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.

ಭ್ರಷ್ಟಾಚಾರ ಆರೋಪ ಸಂಬಂಧ ಪತ್ರ ಬರೆದು ಸ್ಪಷ್ಟನೆ ನೀಡಿದ ರವಿ ಡಿ.ಚನ್ನಣ್ಣನವರ್  ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರ ರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿದೆ  ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ, ಆರೋಪಿಸಿದ್ದು, ಅವುಗಳೆಲ್ಲ ಕಾನೂನು ಬದ್ಧವಾಗಿಯೇ ಖರೀದಿಸಿದ್ದು, ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿರುತ್ತಾರೆ.

ಇವುಗಳನ್ನು ನಾನು ಭ್ರಷ್ಟ ರೀತಿಯಿಂದ ಸಂಪಾದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನನ್ನು ತೇಜೋವಧೆ ಮಾಡಬೇಕೆಂದೇ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸುತ್ತಿದ್ದಾರೆ. ನಾನೊಬ್ಬ ಅಖಿಲ ಭಾರತೀಯ ಸೇವಕನಾಗಿದ್ದು, ಸೇವಾ ನಿಯಮಗಳ ಅಡಿ ವರ್ತಿಸಬೇಕಾದ್ದು ನನ್ನ ಕರ್ತವ್ಯ.ಆದ್ದರಿಂದ ಈ ಕುರಿತಂತೆ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನು ಬದ್ಧವಾಗಿ ಈ ಕೆಳಕಂಡಂತೆ ಕ್ರಮ ಕೈಗೊಂಡಿರುತ್ತೇನೆ. ನನಗೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ, ಎಲ್ಲ ಸುಳ್ಳು ಸುದ್ದಿಗಳನ್ನು ನಂಬದಂತೆ, ಎಲ್ಲ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.

ಮಾಧ್ಯಮಗಳು ಪ್ರಚಾರ ಮಾಡದಂತೆ ತಡೆಯಾಜ್ಞೆ ತಂದದ್ದು ಅವುಗಳ ಅಭಿವ್ಯಕ್ತಿ ಸತ್ವವನ್ನು ಕುಗ್ಗಿಸಲು ಅಲ್ಲ. ಅನೇಕ ಸಂಕಷ್ಟಗಳ ನಡುವೆ ಬೆಳೆದ ನಾನು, ನನ್ನ ಸ್ವಾಭಿಮಾನ ಮತ್ತು ವ್ಯಕ್ತಿತ್ವದ ಬಗ್ಗೆ ಸದಾ ಎಚ್ಚರದಲ್ಲಿ ಇದ್ದೇನೆ. ಕೆಲವು ಸುಳ್ಳು ಸುದ್ದಿಗಳು ನನ್ನ ಬಗ್ಗೆ ಹರಿದಾಡಿದ ಕಾರಣ ನಾನು ತಡೆಯಾಜ್ಞೆ ತಂದದ್ದನ್ನು ಅನ್ಯತಾ ಭಾವಿಸಬಾರದೆಂದು ಈ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಚಿಸಿದ್ದೇನೆ.ಹಾಗೆಯೇ ನನಗೆ ನ್ಯಾಯವಾದಿಗಳ ಬಗ್ಗೆ, ಸ್ವಚ್ಛ ವ್ಯವಸ್ಥೆ ಬಯಸುವವರ ಬಗ್ಗೆ, ಅಪಾರ ಗೌರವವಿದೆ. ಈ ಮೂಲಕ ನನ್ನ ಆತ್ಮೀಯರೆಲ್ಲರಿಗೂ ಮನವಿ ಮಾಡುವುದೇನೆಂದರೆ, ತಾವು ದಯಮಾಡಿ ಯಾವುದೇ ಪ್ರತಿಕ್ರಿಯೆ ನೀಡಬಾರದು. ಅಶ್ಲೀಲ ಪದ ಬಳಕೆ, ಹೀಯಾಳಿಸುವುದನ್ನು ಮಾಡಬಾರದು ಎಂದು ಎಲ್ಲಾ ಮಾಧ್ಯಮಗಳ ಮೂಲಕ ಕೇಳಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ‌.

ಹಿಂದಿನ ಲೇಖನಮದುವೆಯಾದ 6 ವರ್ಷದ ಬಳಿಕ ಆಟೋ ಚಾಲಕನೊಂದಿಗೆ ಪ್ರೇಮ: ಗಂಡ, ಮಗಳು ಬೇಡವೆಂದ ಮಹಿಳೆ
ಮುಂದಿನ ಲೇಖನಗ್ಯಾಸ್ ಪೈಪ್ ಲೈನ್ ಯೋಜನೆ ಬೆಂಬಲಿಸಿ ಸಹಿ ಸಂಗ್ರಹ ಅಭಿಯಾನ