ಮನೆ ರಾಜಕೀಯ ಪರಿಷತ್‌ ಚುನಾವಣೆ: 7 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಪರಿಷತ್‌ ಚುನಾವಣೆ: 7 ಅಭ್ಯರ್ಥಿಗಳು ಅವಿರೋಧ ಆಯ್ಕೆ

0

ಬೆಂಗಳೂರು(Bengaluru): ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಏಳು ಸ್ಥಾನಗಳಿಗೆ ಏಳೂ ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂಕೆ ವಿಶಾಲಾಕ್ಷಿ ಘೋಷಣೆ ಮಾಡಿದರು.

ಶುಕ್ರವಾರ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಏಳು ಸ್ಥಾನಗಳಿಗೆ ಏಳು ಜನರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರ.

ಏಳು ಸ್ಥಾನಗಳಿಗೆ ಜೂನ್ 3 ರಂದು ನಡೆಯಬೇಕಾಗಿದ್ದ ಚುನಾವಣೆಗೆ ಬಿಜೆಪಿಯಿಂದ ನಾಲ್ಕು, ಕಾಂಗ್ರೆಸ್‌ನಿಂದ ಇಬ್ಬರು ಹಾಗೂ ಜೆಡಿಎಸ್‌ನಿಂದ ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಿಜೆಪಿಯಿಂದ ಲಕ್ಷ್ಮಣ್‌ ಸವದಿ, ಕೇಶವ್‌ ಪ್ರಸಾದ್, ಹೇಮಲತಾ ನಾಯಕ್ ಹಾಗೂ ಛಲವಾದಿ ನಾರಾಯಣ ಸ್ವಾಮಿ ನಾಮಪತ್ರ ಸಲ್ಲಿಸಿದ್ದರು.

ಕಾಂಗ್ರೆಸ್‌ನಿಂದ ಅಬ್ದುಲ್ ಜಬ್ಬಾರ್, ಎಂ ನಾಗರಾಜ್ ಯಾದವ್ ನಾಮಪತ್ರ ಸಲ್ಲಿಕೆ ಮಾಡಿದರೆ, ಜೆಡಿಎಸ್‌ನಿಂದ ಟಿಎ ಶರವಣ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇವರ ಹೊರತಾಗಿ ಬೇರೆ ಯಾರೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡದಿದ್ದ ಕಾರಣಕ್ಕಾಗಿ ಏಳು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜೂನ್ 10 ರಂದು ರಾಜ್ಯಸಭೆ ಚುನಾವಣೆ

ಇನ್ನು, ರಾಜ್ಯಸಭೆ ಚುನಾವಣೆ ಜೂನ್ 10ರಂದು ನಡೆಯಲಿದೆ. ಅಂದೇ ಮತ ಎಣಿಕೆ ಸಹ ನಡೆಯಲಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಜೈ ರಾಮ್ ರಮೇಶ್, ಕೆಸಿ ರಾಮಮೂರ್ತಿ, ಆಸ್ಕರ್ ಫರ್ನಾಂಡಿಸ್ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸದಸ್ಯತ್ವ ಜೂನ್ 6ರಂದು ಕೊನೆಗೊಳ್ಳಲಿದೆ. ಈ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

ಹಿಂದಿನ ಲೇಖನದಲಿತ ಯುವಕನ ಹತ್ಯೆ: ಇಬ್ಬರ ಬಂಧನ
ಮುಂದಿನ ಲೇಖನರಾಜ್ಯದಲ್ಲಿ ೬೫ ಸಾವಿರ ಕೋಟಿ ಬಂಡವಾಳ ಹೂಡಲು ಹಲವು ಕಂಪನಿಗಳು ಬದ್ಧತೆ ತೋರಿವೆ: ಸಿಎಂ ಬೊಮ್ಮಾಯಿ