ಮನೆ ರಾಷ್ಟ್ರೀಯ ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ

ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ

0

ಶ್ರೀಹರಿಕೋಟ(ಆಂಧ್ರ ಪ್ರದೇಶ): ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೊ ವಿಜ್ಞಾನಿಗಳು ಇದೀಗ ಭಾರತದ ಬಹು ನಿರೀಕ್ಷಿತ ಚಂದ್ರಯಾನ-3 ಉಡಾವಣೆಗೆ ಸಜ್ಜಾಗಿದ್ದು, ಕ್ಷಣಗಣನೆ ಆರಂಭವಾಗಿದೆ.

Join Our Whatsapp Group

ಭಾರತೀಯ ಕಾಲಮಾನ ಇಂದು ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡ್ಡಯನವಾಗಲಿದೆ. ಇಸ್ರೊದ 6 ವಾರಗಳ ಕಾರ್ಯಾಚರಣೆ ಇಂದು ಆರಂಭವಾಗುತ್ತಿದೆ.

ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ನ್ನು ಹೊಂದಿದ್ದು, ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವನ್ನು ಹೊಂದಿದೆ. ಚಂದ್ರಯಾನ-3 ಉಪಗ್ರಹವನ್ನು ಎಲ್ ವಿಎಂ3 ರಾಕೆಟ್ ಇಂದು ಮಧ್ಯಾಹ್ನ 2.35ಕ್ಕೆ ಹೊತ್ತೊಯ್ಯಲಿದೆ. ಅದಕ್ಕೆ ಅಂತಿಮ ಕ್ಷಣದ ಪೂರ್ವಸಿದ್ಧತೆಗಳು ಸರಾಗವಾಗಿ ಸಾಗುತ್ತಿದೆ ಎಂದು ಇಸ್ರೊ ತಿಳಿಸಿದೆ.

ಉಪಗ್ರಹ ಇಳಿಯಲು ಗೊತ್ತುಪಡಿಸಿದ ಲ್ಯಾಂಡಿಂಗ್ ಕೇಂದ್ರ ಚಂದ್ರನ ದಕ್ಷಿಣ ಧ್ರುವವಾಗಿದೆ, ಚಂದ್ರನ ಮೇಲ್ಮೈ ಮೇಲೆ ಆಗಸ್ಟ್ 23 ಅಥವಾ 24 ರ ಸುಮಾರಿಗೆ ಲ್ಯಾಂಡಿಂಗ್ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಇದು 14 ಭೂಮಿಯ ದಿನಗಳಿಗೆ ಸಮನಾಗಿರುತ್ತದೆ, ಚಂದ್ರಯಾನ-3 ಚಂದ್ರನ ಪರಿಶೋಧನೆಗೆ ಸಿದ್ಧವಾಗಿದೆ.

ಇಸ್ರೋ ಮುಖ್ಯಸ್ಥರು ಇಡೀ ರಾಷ್ಟ್ರದ ಜನತೆಗೆ ಚಂದ್ರಯಾನ-3 ರ ನೇರ ಉಡಾವಣೆಯನ್ನು ವೀಕ್ಷಿಸಲು ಒತ್ತಾಯಿಸಿದ್ದಾರೆ. ಇಸ್ರೋದ ಅಧಿಕೃತ ವೆಬ್‌ ಸೈಟ್ ಮತ್ತು ಯೂಟ್ಯೂಬ್ ಚಾನೆಲ್‌ ನಲ್ಲಿ ಲಭ್ಯವಿರುವ ಲೈವ್ ಸ್ಟ್ರೀಮಿಂಗ್ ಮೂಲಕ ಆಸಕ್ತರು ಉಡಾವಣೆಯನ್ನು ನೋಡಬಹುದು.

ಹಿಂದಿನ ಲೇಖನಭಾರಿ ಮಳೆಗೆ 145 ಮಂದಿ ಸಾವು: ಉತ್ತರಾಖಾಂಡ್, ಹರಿಯಾಣದಲ್ಲಿ ಭಾರಿ ಮಳೆ ಎಚ್ಚರಿಕೆ
ಮುಂದಿನ ಲೇಖನಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ