ಏಷ್ಯಾಕಪ್ ಟೂರ್ನಿಗೆ ಕೌಂಟ್ ಡೌನ್ ಶುರುವಾಗಿದೆ. ಈ ಟೂರ್ನಿಗಾಗಿ ಈಗಾಗಲೇ ಭಾರತ, ಪಾಕಿಸ್ತಾನ್, ನೇಪಾಳ ಹಾಗೂ ಬಾಂಗ್ಲಾದೇಶ್ ತಂಡಗಳನ್ನು ಪ್ರಕಟಿಸಲಾಗಿದೆ. ಇನ್ನು ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ್ ತಂಡಗಳ ಘೋಷಣೆಯಾಗಬೇಕಿದೆ.
ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನ್ ವಿರುದ್ಧ ಆಡಲಿದೆ.
ಸೆಪ್ಟೆಂಬರ್ 2 ರಂದು ನಡೆಯುವ ಪಾಕ್ ವಿರುದ್ಧದ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸುತ್ತಿದ್ದು, ಹೀಗಾಗಿ ಶುಭಾರಂಭವನ್ನು ನಿರೀಕ್ಷಿಸಬಹುದು.
ಆದರೆ ಈ ಹೈವೋಲ್ಟೇಜ್ ಕದನಕ್ಕೂ ಮುನ್ನ ಟೀಮ್ ಇಂಡಿಯಾ ಯಾವುದೇ ಏಕದಿನ ಪಂದ್ಯವಾಡುತ್ತಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಈಗಾಗಲೇ ಬಲಿಷ್ಠ ಬಳಗವನ್ನು ಘೋಷಿಸಿರುವ ಪಾಕಿಸ್ತಾನ್ ತಂಡವು ಏಷ್ಯಾಕಪ್ ಗೂ ಮುನ್ನ ಶ್ರೀಲಂಕಾದಲ್ಲಿ ಅಫ್ಘಾನಿಸ್ತಾನ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ.
ಈ ಬಾರಿಯ ಏಷ್ಯಾಕಪ್ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ನಡೆಯಲಿದೆ. ಇಲ್ಲಿ ಭಾರತದ ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯ ವಹಿಸಲಿದೆ. ಅದರಂತೆ ಸೆಪ್ಟೆಂಬರ್ 2 ರಂದು ಭಾರತ-ಪಾಕಿಸ್ತಾನ್ ಕ್ಯಾಂಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದೆ.
ಉಭಯ ತಂಡಗಳು:
ಪಾಕಿಸ್ತಾನ್ ತಂಡ: ಅಬ್ದುಲ್ಲಾ ಶಫೀಕ್, ಫಖರ್ ಝಮಾನ್, ಇಮಾಮ್ ಉಲ್ ಹಕ್, ಬಾಬರ್ ಆಝಂ (ನಾಯಕ), ಸಲ್ಮಾನ್ ಅಲಿ ಅಘಾ, ಇಫ್ತಿಕರ್ ಅಹ್ಮದ್, ತಯ್ಯಬ್ ತಾಹಿರ್, ಸೌದ್ ಶಕೀಲ್, ಮೊಹಮ್ಮದ್ ರಿಝ್ವಾನ್, ಮೊಹಮ್ಮದ್ ಹ್ಯಾರಿಸ್, ಶಾದಾಬ್ ಖಾನ್, ಮೊಹಮ್ಮದ್ ನವಾಝ್, ಉಸಾಮಾ ಮಿರ್, ಹರಿಸ್ ಅಶ್ರಫ್ ರೌಫ್, ಮೊಹಮ್ಮದ್ ವಾಸಿಂ, ನಸೀಮ್ ಶಾ ಮತ್ತು ಶಾಹೀನ್ ಅಫ್ರಿದಿ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).