ಮೈಸೂರು: ಬಿಜೆಪಿ- ಜೆಡಿಎಸ್ ಜೊತೆಯಾಗಿ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಯ ಸಮಾರೋಪ ಸಮಾವೇಶದ ಪ್ರಮುಖ ಅಂಶಗಳು ಇಲ್ಲಿವೆ
ಬಿಜೆಪಿ- ಜೆಡಿಎಸ್ ಜೊತೆಯಾಗಿ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಯ ಸಮಾರೋಪ ಸಮಾವೇಶಕ್ಕೆ ಕ್ಷಣಗಣನೆ ಆರಂಭ ಆಗಿದೆ.
ಅರಮನೆ ಸಮೀಪದ ಕೋಟೆ ಆಂಜನೇಯಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸುವ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮೆರವಣಿಗೆ ಹೊರಟಿದ್ದಾರೆ. ಅಲ್ಲಿಂದ ಸುಮಾರು ಎರಡು ಕಿ.ಮೀ. ನಡಿಗೆಯ ಮೂಲಕ ಮಹಾರಾಜ ಕಾಲೇಜು ಮೈದಾನಕ್ಕೆ ಬರಲಿದ್ದಾರೆ. ಅಲ್ಲಿ ಸಮಾವೇಶ ನಡೆಯಲಿದೆ.
ಸಮಾವೇಶದಲ್ಲಿ ಒಂದು ಲಕ್ಷದಷ್ಟು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸುತ್ತಮುತ್ತಲ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಈಗಾಗಲೇ ಬಂದಿದ್ದಾರೆ.