ಮನೆ ಕಾನೂನು ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಕೋರ್ಟ್​​

ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಕೋರ್ಟ್​​

0

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.

Join Our Whatsapp Group

ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲಾಗುವುದಿಲ್ಲ. ಅಕ್ಕ (ಭವಾನಿ ರೇವಣ್ಣ) ಬಟ್ಟೆ ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ ಎಂದು ನ್ಯಾ. ಕೃಷ್ಣ ಎಸ್​ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಹೇಳಿತು.

ಏನಿದು ಪ್ರಕರಣ?:

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಕರಣದ ಮೊದಲ ಆರೋಪಿ ಎಚ್‌.ಡಿ.ರೇವಣ್ಣ ಬಂಧನಕ್ಕೊಳಗಾಗಿದ್ದರು. ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದಲ್ಲಿ ಭವಾನಿ ಅವರ ಹೆಸರೂ ಇದ್ದುದರಿಂದ ಅವರು ನಿರೀಕ್ಷಣಾ ಜಾಮೀನು ಕೋರಿದ್ದರು. ಅವರನ್ನು ಬಂಧಿಸದಂತೆ ಹೈಕೋರ್ಟ್‌ನ ಜನಪ್ರತಿನಿಧಿಗಳ ವಿಶೇಷ ನ್ಯಾಯಪೀಠ ಮಧ್ಯಂತರ ಜಾಮೀನು ನೀಡಿತ್ತು. ತನಿಖಾಧಿಕಾರಿ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ಇದೇ 7ರಂದು ಸೂಚಿಸಿತ್ತು.

ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಟೌನ್‌ ಪೊಲೀಸ್ ಠಾಣೆಯಲ್ಲಿ 2024ರ ಏಪ್ರಿಲ್ 28 ರಂದು ಪ್ರಕರಣ ದಾಖಲಿಸಲಾಗಿದೆ.