ಮನೆ ಕಾನೂನು ಮಳಲಿ ಮಸೀದಿಗೆ ಸಂಬಂಧಿಸಿದ ವ್ಯಾಜ್ಯ ವಿಚಾರಣೆಗೆ ಕೋರ್ಟ್‌ ಒಪ್ಪಿಗೆ

ಮಳಲಿ ಮಸೀದಿಗೆ ಸಂಬಂಧಿಸಿದ ವ್ಯಾಜ್ಯ ವಿಚಾರಣೆಗೆ ಕೋರ್ಟ್‌ ಒಪ್ಪಿಗೆ

0

ಮಂಗಳೂರು: ನಗರದ ಹೊರವಲಯದಲ್ಲಿರುವ ಗಂಜಿಮಠ ಬಳಿಯ ಮಳಲಿ ಮಸೀದಿಗೆ ಸಂಬಂಧಿಸಿದ ವ್ಯಾಜ್ಯವನ್ನು ಸಿವಿಲ್‌ ನ್ಯಾಯಾಲಯದಲ್ಲಿ ವಿಚಾರಣೆ ಮಾಡಬಹುದೆಂದು ಮೂರನೇ ಹೆಚ್ಚುವರಿ ಸಿವಿಲ್‌ ಕೋರ್ಟ್‌ ಬುಧವಾರ ನ್ಯಾಯಾಲಯ ತೀರ್ಪು ನೀಡಿದೆ.

ವಿಶ್ವಹಿಂದೂ ಪರಿಷತ್​ನ ಅರ್ಜಿ ಸ್ವೀಕರಿಸಿದ ನ್ಯಾಯಾಲಯವು ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಮಳಲಿ ಮಸೀದಿಯ ಅರ್ಜಿ ವಿಚಾರಣೆಯು ಸಿವಿಲ್ ನ್ಯಾಯಾಲಯದ ವ್ಯಾಪ್ತಿಯಲ್ಲೇ ನಡೆಯಲಿದೆ ಎಂದು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಮೂಲ ದಾವೆ ಆಲಿಸಲು ವಿಚಾರಣಾಧೀನ ನ್ಯಾಯಾಲಯವು ಅಧಿಕಾರ ವ್ಯಾಪ್ತಿ ಹೊಂದಿದೆ ಎಂದು ಹೇಳಿದೆ. ನ್ಯಾಯಾಲಯವು ಕಮಿಷನರ್ ನೇಮಿಸಿ ಮಸೀದಿ ಸರ್ವೇ ಮಾಡಬೇಕೆಂದು ಒತ್ತಾಯಿಸಿ ವಿಹೆಚ್​​ಪಿ ಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ಸ್ವೀಕರಿಸಿದ ಕೋರ್ಟ್ 2023ರ​ ಜನವರಿ 8ಕ್ಕೆ ವಿಚಾರಣೆ ಮುಂದೂಡಿದೆ.ಇ

ನ್ನೊಂದೆಡೆ ಮಸೀದಿ ಕಾಮಗಾರಿ ತಡೆಯಾಜ್ಞೆ ತೆರವು ಮಾಡಿ, ವಿಹೆಚ್​ಪಿ ಅರ್ಜಿ ವಜಾಗೊಳಿಸುವಂತೆ ಮಸೀದಿ ಕಮಿಟಿ ಮನವಿ ಮಾಡಿತ್ತು. ಮಸೀದಿ ಆಡಳಿತ ಮಂಡಳಿ ಪರ ವಕೀಲರು ಮಸೀದಿ ವಕ್ಪ್ ಆಸ್ತಿಯಾಗಿರುವುದರಿಂದ ವಕ್ಫ್​ ಟ್ರಿಬ್ಯುನಲ್​’ನಲ್ಲೇ ವಿಚಾರಣೆ ನಡೆಸಬೇಕು ಎಂದು ವಾದಿಸಿದ್ದರು. ಆದರೆ ಮಸೀದಿ ಕಮಿಟಿ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಜ್ಞಾನವಾಪಿ ಮಾದರಿಯಲ್ಲೇ ಮಳಲಿ ಮಸೀದಿ ವಿವಾದದ ವಿಚಾರಣೆಯೂ ಸಾಗಲಿದೆ.