ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1206 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,32,489ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40147 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ 1653 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,81,825ಕ್ಕೆ ಏರಿಕೆಯಾಗಿದೆ. ಇನ್ನು 10475 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 870 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,52,818ಕ್ಕೆ ಏರಿಕೆಯಾಗಿದೆ.
Saval TV on YouTube