ಬೆಂಗಳೂರು (Bengaluru)-ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 126 ಕೋವಿಡ್ (Covid) ಸೋಂಕಿನ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,47,622ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದು, ಒಟ್ಟಾರೇ ಮೃತರ ಸಂಖ್ಯೆ 40,059ಕ್ಕೆ ಏರಿಕೆಯಾಗಿದೆ. ಇನ್ನು 76 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 39,05,736 ಆಗಿದೆ. ರಾಜ್ಯದಲ್ಲಿ ಸದ್ಯ 1,785 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ 120 ಪ್ರಕರಣ ಪತ್ತೆಯಾಗಿದ್ದು, ಚಿಕ್ಕಮಗಳೂರು 2, ಚಿತ್ರದುರ್ಗ 1, ಕಲಬುರಗಿ 1, ಉಡುಪಿ ಹಾಗೂ ಮೈಸೂರಿನಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ. ಉಳಿದೆಲ್ಲಾ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.