ಮನೆ ಆರೋಗ್ಯ ಕೋವಿಡ್-19: ದೇಶದಲ್ಲಿಂದು 2,539 ಹೊಸ ಪ್ರಕರಣ ಪತ್ತೆ

ಕೋವಿಡ್-19: ದೇಶದಲ್ಲಿಂದು 2,539 ಹೊಸ ಪ್ರಕರಣ ಪತ್ತೆ

0

ನವದೆಹಲಿ: ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 2,539 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 60 ಮಂದಿ ಸಾವನ್ನಪ್ಪಿದ್ದಾರೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,01,477ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,16,132ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 30,799ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 4,491 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,24,54,546ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 7,52,818 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 78,05,06,974 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,80,60,93,107 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಹಿಂದಿನ ಲೇಖನಜಪಾನ್‍ ಕರಾವಳಿಯಲ್ಲಿ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ
ಮುಂದಿನ ಲೇಖನತಮ್ಮನ ಕೊನೆ ಸಿನಿಮಾದಲ್ಲಿ ಶಿವಣ್ಣ,  ರಾಘವೇಂದ್ರ ರಾಜ್ ಕುಮಾರ್