ಮನೆ ರಾಜಕೀಯ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

0

ಬೆಂಗಳೂರುಕೋವಿಡ್‌ 50-50 ರೂಲ್ಸ್, ನೈಟ್‌ ಕರ್ಫ್ಯೂ ಮತ್ತಿತರ ನಿಯಮಾವಳಿಗಳ ತೆರವು ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶನಿವಾರ ಮಹತ್ವದ ಸಭೆ ನಡೆಯಲಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ.

ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಆರೋಗ್ಯ ಸಚಿವರು, ಕಂದಾಯ ಸಚಿವರು, ಗೃಹ ಸಚಿವರು, ಉನ್ನತ ಶಿಕ್ಷಣ ಸಚಿವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು, ಇಲಾಖಾ ಕಾರ್ಯದರ್ಶಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತ, ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಇಂದು ಮುಖ್ಯಮಂತ್ರಿಗಳು ಕರೆದಿರುವ ಸಭೆಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗುತ್ತಾರೆ. ಇಂದಿನ ಸಭೆಯಲ್ಲಿ ಸರ್ಕಾರ ಹೊಟೇಲ್, ಬಾರ್, ಪಬ್, ರೆಸ್ಟೋರೆಂಟ್, ಚಿತ್ರಮಂದಿರಗಳು,ಜಿಮ್, ಸ್ವಿಮ್ಮಿಂಗ್ ಪೂಲ್ ಗಳು ಸೇರಿದಂತೆ ಕೆಲವು ಸೇವೆಗಳಿಗೆ ವಿಧಿಸಿದ್ದ 50-50 ನಿಯಮ ಕೈ ಬಿಡುವ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.

ಕೊರೋನಾ ಸೋಂಕಿನ ಹೆಚ್ಚಳ ಹಿನ್ನೆಲೆಯಲ್ಲಿ ಜನವರಿ ಆರಂಭದಿಂದ ಬೆಂಗಳೂರಿನಲ್ಲಿ 9ನೇ ತರಗತಿಯವರೆಗೆ ಶಾಲೆಗಳಿಗೆ ರಜೆ ನೀಡಿ ಆನ್ ಲೈನ್ ನಲ್ಲಿ ತರಗತಿ ಮುಂದುವರಿಸುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಮುಂದಿನ ವಾರದಿಂದ 7,8ನೇ ತರಗತಿಗಳ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಬಹುದು ಎಂದು ಹೇಳಲಾಗುತ್ತಿದೆ. 

ಹಿಂದಿನ ಲೇಖನಬಜೆಟ್ ಅಧಿವೇಶನ 2022: ಸರ್ಕಾರ-ಪ್ರತಿಪಕ್ಷಗಳ ಸಿದ್ಧತೆ
ಮುಂದಿನ ಲೇಖನಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ: ಜೆಡಿಎಸ್‌ ಶಾಸಕ ಸಿ.ಎಸ್‌.ಪುಟ್ಟರಾಜು