ಮನೆ ಆರೋಗ್ಯ ಕೊರೋನಾ: ಬೆಂಗಳೂರಿನಲ್ಲಿ 74 ಸೇರಿ 109 ಮಂದಿಗೆ ಪಾಸಿಟಿವ್

ಕೊರೋನಾ: ಬೆಂಗಳೂರಿನಲ್ಲಿ 74 ಸೇರಿ 109 ಮಂದಿಗೆ ಪಾಸಿಟಿವ್

0

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೇವಲ 109 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 39,45,079ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 40044ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 74 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,81,290ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಇಂದು 117 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,03,201ಕ್ಕೆ ಏರಿಕೆಯಾಗಿದೆ. ಇನ್ನು 1792 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.