ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ಕೊರೊನಾದ ಹೊಸ ಪ್ರಕರಣಗಳ ಸಂಖ್ಯೆ ಸಾವಿರಕ್ಕಿಂತ ಕಡಿಮೆ ದಾಖಲಾಗಿದೆ.
24 ಗಂಟೆಗಳ ಅವಧಿಯಲ್ಲಿ ಕೋವಿಡ್ ದೃಢಪಟ್ಟ 913 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಕೊರೊನಾ ವೈರಸ್ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದು, 1,316 ಮಂದಿ ಗುಣಮುಖರಾಗಿದ್ದಾರೆ.
ಪ್ರಸ್ತುತ 12,597 ಸಕ್ರಿಯ ಪ್ರಕರಣಗಳಿದ್ದು, ನಿತ್ಯದ ಕೋವಿಡ್ ಪಾಸಿಟಿವಿಟಿ ದರ ಶೇಕಡ 0.29ಕ್ಕೆ ಇಳಿಕೆಯಾಗಿದೆ. ಈವರೆಗೂ ಕೋವಿಡ್ ಕಾರಣಗಳಿಂದಾಗಿ 5,21,358 ಮಂದಿ ಸಾವಿಗೀಡಾಗಿದ್ದಾರೆ. ದೇಶದಾದ್ಯಂತ ಒಟ್ಟು 184.70 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ.