ನವದೆಹಲಿ(New delhi): ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,088 ಕೋವಿಡ್(Covid-19) ಪ್ರಕರಣಗಳು(Cases) ಪತ್ತೆಯಾಗಿದ್ದು, 26 ಮಂದಿ ಸಾವನ್ನಪ್ಪಿದ್ದಾರೆ ಎಂದು ಐಸಿಎಂಆರ್ (ICMR)ಮಾಹಿತಿ ನೀಡಿದೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,38,016ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,21,736ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,081 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,05,410ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 4,06,251 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 79,45,25,202 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,85,90,68,616 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.