ಮನೆ ರಾಜ್ಯ ಕೋವಿಡ್:‌ ರಾಜ್ಯದಲ್ಲಿ 64 ಮಂದಿಗೆ ಪಾಸಿಟಿವ್‌

ಕೋವಿಡ್:‌ ರಾಜ್ಯದಲ್ಲಿ 64 ಮಂದಿಗೆ ಪಾಸಿಟಿವ್‌

0

ಬೆಂಗಳೂರು (Bengaluru)- ರಾಜ್ಯದಲ್ಲಿ ಕೊರೊನಾ (Corona) ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 64 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 39,46,998ಕ್ಕೆ ಏರಿಕೆಯಾಗಿದೆ. 69 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,05228ಕ್ಕೆ ಏರಿಕೆಯಾಗಿದೆ. ಇನ್ನು 1671 ಸಕ್ರಿಯ ಪ್ರಕರಣಗಳಿವೆ.

ಇನ್ನು ಸೋಂಕಿನಿಂದ  ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40057 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ಬೆಂಗಳೂರಿನಲ್ಲಿ ಇಂದು 63 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,82,999ಕ್ಕೆ ಏರಿಕೆಯಾಗಿದೆ.