ಮನೆ ರಾಜಕೀಯ ಕೊರೊನಾ ಇಳಿಕೆ; ಬೆಂಗಳೂರಿನಲ್ಲಿ ಶಾಲೆ ತೆರೆಯುವ ಚಿಂತನೆ: ಸಚಿವ ಬಿ.ಸಿ.ನಾಗೇಶ್

ಕೊರೊನಾ ಇಳಿಕೆ; ಬೆಂಗಳೂರಿನಲ್ಲಿ ಶಾಲೆ ತೆರೆಯುವ ಚಿಂತನೆ: ಸಚಿವ ಬಿ.ಸಿ.ನಾಗೇಶ್

0

ಬೆಂಗಳೂರು  ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾದ ಕಾರಣಕ್ಕಾಗಿ ಶಾಲೆಗಳಿಗೆ ರಜೆ ನೀಡಲಾಗಿತ್ತು. ಆದರೆ ಇದೀಗ ಸೋಂಕು ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿರುವ ಕಾರಣಕ್ಕಾಗಿ ಶಾಲೆಗಳನ್ನು  ಪುನಾರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್, ಸೋಮವಾರದಿಂದ ಬೆಂಗಳೂರಿನಲ್ಲಿ ಶಾಲೆ ತೆರಯಲು ಚಿಂತನೆ ನಡೆಸಿದ್ದೇವೆ.  1ರಿಂದ 9ನೇ ತರಗತಿ ತೆರಯಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ಬೆಂಗಳೂರಿನಲ್ಲಿ ಶಾಲೆ ಓಪನ್ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಲಾಗುತ್ತದೆ.  ನಾಳಿನ ಸಭೆಯಲ್ಲಿ ಚರ್ಚಿಸಿ ಶಾಲೆ ಆರಂಭದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿ  ಬೇರೆ ಜಿಲ್ಲೆಗಳಲ್ಲಿ ಕೊರೋನಾ ಹೆಚ್ಚಿರುವ ಕಡೆಗಳಲ್ಲಿ ಮಾತ್ರ ಶಾಲೆ ಬಂದ್ ಮಾಡಲಾಗುತ್ತಿದೆ.