ಮನೆ ಸುದ್ದಿ ಜಾಲ ಕೊರೊನಾ: ದೇಶದಲ್ಲಿಂದು 3.17 ಲಕ್ಷಕ್ಕೆ ಸೋಂಕಿತರ ಸಂಖ್ಯೆ ಏರಿಕೆ

ಕೊರೊನಾ: ದೇಶದಲ್ಲಿಂದು 3.17 ಲಕ್ಷಕ್ಕೆ ಸೋಂಕಿತರ ಸಂಖ್ಯೆ ಏರಿಕೆ

0

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಸಾಗುತ್ತಿದ್ದು, ಹಲವು ದಿನಗಳಿಂದ ಎರಡೂವರೆ ಲಕ್ಷದಲ್ಲಿದ್ದ ಸೋಂಕಿತರ ಸಂಖ್ಯೆ ಇಂದು 3 ಲಕ್ಷ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 3,17,532 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 491 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 38218773ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,87,693ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 19,24,051ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,23,990 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,58,07,029 ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 18,69,642 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 70,74,21,650 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,58,88,47,554 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

9,287 ಒಮಿಕ್ರಾನ್ ಸೋಂಕಿತರು:
ದೇಶದಲ್ಲಿ  ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 9,287 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 9,287ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.