ಬೆಂಗಳೂರು : ಮಹಾಮಾರಿ ಕೊರೊನಾ ಅಬ್ಬರ ಮತ್ತೆ ಹೆಚ್ಚಾಗಿದೆ. ರಾಜ್ಯದಲ್ಲಿ ಕೋವಿಡ್ ಕೇಸ್ಗಳ ಸಂಖ್ಯೆ ಹೆಚ್ಚಳವಾಗಿದ್ದು ಆತಂಕ ಸೃಷ್ಟಿಸಿದೆ. ಕಳೆದ 24 ಗಂಟೆಯಲ್ಲಿ ಬರೋಬ್ಬರಿ 75 ಮಂದಿಗೆ ಕೋವಿಡ್-19 ದೃಢಪಟ್ಟಿದೆ.
ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2460ಕ್ಕೆ ಏರಿಕೆಯಾಗಿದೆ. ಇಂದು 112 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 2235 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 214 ಸಕ್ರಿಯ ಪ್ರಕರಣಗಳಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
310 ಜನರಿಗೆ ಟೆಸ್ಟ್ ಮಾಡಲಾಗಿದ್ದು 75 ಜನರಲ್ಲಿ ಕೊರೊನಾ ಪತ್ತೆಯಾಗಿದೆ. ಇದರೊಂದಿಗೆ ಪಾಸಿಟಿವಿಟಿ ರೇಟ್ 24.1ಕ್ಕೆ ಏರಿಕೆಯಾಗಿದೆ. ಅಂದ್ರೆ 100 ಜನರಿಗೆ ಕೊರೊನಾ ಟೆಸ್ಟ್ ಮಾಡಿದರೆ 24ರಿಂದ 25 ಜನರಲ್ಲಿ ಕೊರೊನಾ ಪತ್ತೆಯಾಗುತ್ತಿದೆ.














