ಮನೆ ರಾಜ್ಯ ಕೋವಿಡ್ ಹೆಚ್ಚಳ: ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯ

ಕೋವಿಡ್ ಹೆಚ್ಚಳ: ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯ

0

ಬೆಂಗಳೂರು (Bengaluru)- ಬೆಂಗಳೂರಿನಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ‘ಮಾಸ್ಕ್ ಕಡ್ಡಾಯ’ ಮಾಡಲಾಗಿದೆ.
ಕೋವಿಡ್ 4ನೇ ಅಲೆಯ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ವಿಶೇಷ ಆಯುಕ್ತ ಹರೀಶ್ ಕುಮಾರ್ ಅವರು, ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದಿದ್ದಾರೆ.
ಶಾಪಿಂಗ್ ಮಾಲ್‌ಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು, ಆಸ್ಪತ್ರೆಗಳು, ಶಾಲಾ-ಕಾಲೇಜುಗಳು ಮತ್ತು ಜನರು ಸೇರುವ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದಂತೆ ಬಿಬಿಎಂಪಿ ಮಾರ್ಷಲ್‌ಗಳು ಜನರಿಗೆ ಎಚ್ಚರಿಕೆ ನೀಡಲಿದ್ದಾರೆ. ಆದರೆ ಪ್ರಸ್ತುತ ಪಾಲಿಕೆಯು ಸರ್ಕಾರದ ಆದೇಶಕ್ಕೆ ಬದ್ಧವಾಗಿದೆ ಮತ್ತು ಯಾವುದೇ ದಂಡವನ್ನು ವಿಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.