ಮನೆ ಕ್ರೀಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮತ್ತಿಬ್ಬರಿಗೆ ಕೋವಿಡ್ ಸೋಂಕು

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮತ್ತಿಬ್ಬರಿಗೆ ಕೋವಿಡ್ ಸೋಂಕು

0

ಮುಂಬೈ: ಹಾಲಿ ಐಪಿಎಲ್ ಟೂರ್ನಿಗೂ ಕೊರೋನಾ ಮಹಾಮಾರಿ ಕಾಲಿಟ್ಟಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡ ಮತ್ತಿಬ್ಬರಿಗೆ ಕೋವಿಡ್ ಸೋಂಕು ತಗುಲಿದ್ದು, ತಂಡದ ಪ್ರಮುಖ ಆಟಗಾರ ಮಿಚೆಲ್ ಮಾರ್ಷ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಕೊರೊನಾ ಬಿಟ್ಟೂಬಿಡದೇ ಕಾಡುತ್ತಿದ್ದು, ತಂಡದ ಆಸ್ಟ್ರೇಲಿಯಾದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಎರಡನೇ ಆರ್‌ಟಿ-ಪಿಸಿಆರ್ ಪರೀಕ್ಷೆಯಲ್ಲಿ ಕೋವಿಡ್ 19 ಪಾಸಿಟಿವ್ ದೃಢಪಟ್ಟಿದ್ದು, ಈ ಮುನ್ನ ರಾಪಿಡ್ ಆಂಟಿಜೆನ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಬಳಿಕ ಮೊದಲ ಆರ್ ಟಿಪಿಸಿಆರ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿಯಾಗಿತ್ತು.  ಆದರೆ ಎರಡನೇ ಬಾರಿಯ ಆರ್ ಟಿಪಿಸಿಆರ್ ಪರೀಕ್ಷೆಯಲ್ಲಿ ವರದಿ ಪಾಸಿಟಿವ್ ಆಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಒಟ್ಟು ಮೂವರು ಸದಸ್ಯರಿಗೆ ಕೋವಿಡ್ ಪಾಸಿಟಿವ್ ತಗುಲಿದೆ. ದೆಹಲಿ ಕ್ಯಾಪಿಟಲ್ಸ್ ನ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್ ಅವರಿಗೂ ಶುಕ್ರವಾರ ಕೋವಿಡ್ ಪಾಸಿಟಿವ್ ಆಗಿದ್ದು ಅವರು ಕ್ವಾರಂಟೈನ್ ನಲ್ಲಿದ್ದಾರೆ. ತಂಡದ ಎಲ್ಲಾ ಸದಸ್ಯರು ಪ್ರಸ್ತುತ ತಮ್ಮ ತಮ್ಮ ಕೊಠಡಿಗಳಲ್ಲಿ ಪ್ರತ್ಯೇಕವಾಗಿದ್ದಾರೆ ಮತ್ತು ನಿಯಮಿತವಾಗಿ ಪರೀಕ್ಷಿಸಲಾಗುತ್ತದೆ.

ದೆಹಲಿ ಟೀಂ ಬುಧವಾರ ಪುಣೆಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆಡಲಿದೆ. ಪುಣೆಗೆ ತಂಡದ ಪ್ರಯಾಣದ ಯೋಜನೆಗಳು ಸದ್ಯಕ್ಕೆ ಸ್ಥಗಿತಗೊಂಡಿದ್ದು, ಪಂದ್ಯದ ಹಣೆಬರಹದ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈ ಬಗ್ಗೆ ಹೇಳಿಕೆಯಲ್ಲಿ,  “ದೆಹಲಿ ಕ್ಯಾಪಿಟಲ್ಸ್ ಆಲ್-ರೌಂಡರ್ ಮಿಚೆಲ್ ಮಾರ್ಷ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದೆ.  ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿ ಕ್ಯಾಪಿಟಲ್ಸ್ ವೈದ್ಯಕೀಯ ತಂಡವು ಮಾರ್ಷ್ ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ” ಎಂದಿದೆ