ಬೆಂಗಳೂರು (Bengaluru)-ರಾಜ್ಯದಲ್ಲಿ ಕೋವಿಡ್ (Covid) ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 191 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,48,283ಕ್ಕೆ ಏರಿಕೆಯಾಗಿದೆ. 138 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,06327ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಇಂದು ಕೋವಿಡ್ ನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40060 ಇದೆ. ಇನ್ನು 1854 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 171 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,84,193ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಸಾವು ವರದಿಯಾಗಿಲ್ಲ.