ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದ್ದು, ಬುಧವಾರ 201 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 974ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ರಾಜ್ಯದಲ್ಲಿ ಇಂದು ಒಬ್ಬರು ಮೃತಪಟ್ಟಿದ್ದಾನೆ. ಇಂದು ಕೋವಿಡ್ ನಿಂದ 257 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,315 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 2.74ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿಯೇ ಇಂದು 121 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇನ್ನುಳಿದಂತೆ ಮೈಸೂರು 10, ತುಮಕೂರು 14, ಧಾರವಾಡ 3 ಪ್ರಕರಣ ಸೇರಿದಂತೆ ಒಟ್ಟು 201 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
Saval TV on YouTube