ಮನೆ ಆರೋಗ್ಯ ದೇಶದಲ್ಲಿ 1778 ಹೊಸ ಕೋವಿಡ್ ಪ್ರಕರಣ ಪತ್ತೆ

ದೇಶದಲ್ಲಿ 1778 ಹೊಸ ಕೋವಿಡ್ ಪ್ರಕರಣ ಪತ್ತೆ

0

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,778 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,30,12,749ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದೇ ವೇಳೆ 800 ಜನರು ಚೇತರಿಸಿಕೊಂಡಿದ್ದು, ಸದ್ಯ 23,087 ಸಕ್ರಿಯ ಪ್ರಕರಣಗಳಿವೆ. 24 ಗಂಟೆಗಳಲ್ಲಿ 62 ಜನರು ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಈ ಮೂಲಕ ಒಟ್ಟು 5,16,605 ಜನರು ಕೋವಿಡ್‌ನಿಂದ ಪ್ರಾಣಕಳೆದುಕೊಂಡಿದ್ದಾರೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 0.26ರಷ್ಟಿದ್ದರೆ, ಕೋವಿಡ್ ಚೇತರಿಕೆ ಪ್ರಮಾಣ ಶೇ 98.75ರಷ್ಟಿದೆ. ಮರಣ ಪ್ರಮಾಣ ಶೇ 1.20ರಷ್ಟಿದೆ.

ದೇಶದಲ್ಲಿ ಈವರೆಗೆ 181.89 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ.

ಹಿಂದಿನ ಲೇಖನಟೆನಿಸ್ ಆಟಗಾರ್ತಿ ಆಶ್ಲೆ ಬಾರ್ಟಿ ನಿವೃತ್ತಿ ಘೋಷಣೆ
ಮುಂದಿನ ಲೇಖನಬುಧವಾರದಂದು ದ್ವಾದಶ ರಾಶಿಗಳ ಭವಿಷ್ಯ