ನವದೆಹಲಿ: ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 1,247 ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ನಿನ್ನೆ 2 ಸಾವಿರಕ್ಕೂ ಹೆಚ್ಚು ಪ್ರಕರಣ ವರದಿಯಾಗಿದ್ದವು. 24 ಗಂಟೆಗಳ ಅವಧಿಯಲ್ಲಿ ಕೋವಿಡ್ನಿಂದ ಒಂದು ಸಾವು ಉತ್ತರ ಪ್ರದೇಶದಲ್ಲಿ ಸಂಭವಿಸಿದೆ.
ಸೋಮವಾರ 214 ಸಾವುಗಳು ವರದಿಯಾಗಿದ್ದವು.ದೇಶದ ಒಟ್ಟು ಸೋಂಕಿತರ ಸಂಖ್ಯೆ 4,30,45,527ಕ್ಕೆ ಏರಿದ್ದು, ಸದ್ಯ 11,860 ಸಕ್ರಿಯ ಪ್ರಕರಣಗಳಿವೆ. ಮೃತಪಟ್ಟ ಸೋಂಕಿತರ ಒಟ್ಟು ಸಂಖ್ಯೆ 5,21,966 ರಷ್ಟಾಗಿದೆ.
ದೇಶದಲ್ಲಿ ಸೋಂಕಿತರ ಪೈಕಿ ಶೇಕಡ 0.03ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ 98.76ರಷ್ಟಿದೆ.ಈವರೆಗೆ ದೇಶದಲ್ಲಿ186.72 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.