ಮನೆ ರಾಷ್ಟ್ರೀಯ ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ ಆರೋಗ್ಯ ಸ್ಥಿತಿ ಗಂಭೀರ

ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ ಆರೋಗ್ಯ ಸ್ಥಿತಿ ಗಂಭೀರ

0

ನವದೆಹಲಿ: ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಪಕ್ಷವು ಪ್ರಕಟಣೆಯಲ್ಲಿ ತಿಳಿಸಿದೆ.

Join Our Whatsapp Group

ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ 72 ವರ್ಷದ ಯೆಚೂರಿ ಅವರನ್ನು ದೆಹಲಿಯ ಏಮ್ಸ್‌ನಲ್ಲಿ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದೆ.

ವೈದ್ಯರ ತಂಡವು ಯೆಚೂರಿ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಿದೆ. ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಯಚೂರಿ ಅವರನ್ನು ಆಗಸ್ಟ್ 19ರಂದು ಏಮ್ಸ್‌ಗೆ ದಾಖಲಿಸಲಾಗಿತ್ತು.