ಮೈಸೂರು: ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ, ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ 2025 ರ…ಐ ಇ ಸಿ ಪರಿಕರಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯಿತ್ರಿ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮ ಮಟ್ಟದಲ್ಲಿ ಕುಷ್ಠರೋಗದ ಕುರಿತು ಹೆಚ್ಚಿನ ಪ್ರಚಾರ ಕೈಗೊಂಡು, ಕುಷ್ಟರೋಗ ಪ್ರಕರಣಗಳನ್ನು ಪತ್ತೆ ಹಚ್ಚಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ದೊರೆಯುವ ಬಹು ವಿಧ ಔಷಧಿ ಚಿಕಿತ್ಸೆಗೆ ಒಳಪಡಿಸುವುದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ತಿಳಿಸಿದರು.
ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ವಿಶೇಷ ಚೇತನರಿಗೆ ಸವಲತ್ತು ನೀಡುವ ಯೋಜನೆಯಾದ ದೇವರಾಜು ಅರಸು ವಿಶೇಷ ವಸತಿ ಯೋಜನೆ ಅಡಿಯಲ್ಲಿ ಕುಷ್ಟರೋಗದಿಂದ ಗುಣಮುಖ ಹೊಂದಿದವರಿಗೆ ಖಾಲಿ ನಿವೇಶನ ಹೊಂದಿದ್ದರೆ ವಸತಿ ಯೋಜನಯಡಿ ಸಹಾಯಧನ ನೀಡಲಾಗುವುದು. ಅಂತಹ ಫಲಾನುಭವಿಗಳು ಹತ್ತಿರದ ಗ್ರಾಮ ಪಂಚಾಯಿತಿ ಅಥವಾ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಪ್ರಯೋಜನ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ, ಡಾ. ಕುಮಾರಸ್ವಾಮಿ.ಪಿ ಸಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಡಾ. ಬೃಂದಾ,ಜಿ ಲ್ಲಾ ಕುಷ್ಟರೋಗ ನಿರ್ಮೂಲನಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.