ಮೈಸೂರು: ಜಿಲ್ಲೆಯಲ್ಲಿ ಶೌಚಾಲಯಗಳ ನಿರ್ಮಾಣದ ಜತೆಗೆ ಅದನ್ನು ಬಳಸುವಂತೆ ಮಾಡುವುದು ಸವಾಲಿನ ಸಂಗತಿಯಾಗಿದ್ದು, ಜಿಲ್ಲೆಯಲ್ಲಿ ಬಯಲು ಶೌಚಾಲಯ ಇಲ್ಲದಂತೆ ಮಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳೆ ಮತ್ತು ಮಕ್ಕಳ ಇಲಾಖೆಗಳು ನಿಗಾವಹಿಸಬೇಕಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ. ಗಾಯತ್ರಿ ತಿಳಿಸಿದರು.
ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಮ್ಮ ಶೌಚಾಲಯ ನಮ್ಮ ಗೌರವ ಶೀರ್ಷಿಕೆಯಡಿಯಲ್ಲಿ ಅಂದದ ಶೌಚಾಲಯ – ಆನಂದದ ಜೀವನ ಎಂಬ ಘೋಷವಾಕ್ಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಶೌಚಾಲಯ ಬಳಕೆ ಮಾಡಬೇಕಿದ್ದು, ಜಾಗತಿಕ ತಾಪಮಾನದ ಬದಲಾವಣೆಯಲ್ಲಿ ಶೌಚಾಲಯ ಬಳಕೆಯೂ ಮುಖ್ಯವಾಗಿದೆ. ಶೌಚಾಲಯ ಬಳಕೆ ಗೌರವದ ಪ್ರಶ್ನೆಯೂ ಆಗಿದೆ. ಹೀಗಾಗಿ ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯಿತ ಮಟ್ಟದಲ್ಲಿ ಕಾರ್ಯಕ್ರಮ ನಡೆಸುವ ಮೂಲಕ ಶೌಚಾಲಯ ಬಳಕೆ ಕುರಿತು ಅರಿವು ಮೂಡಿಸಲಾಗುತ್ತದೆ. ಶೌಚಾಲಯ ನಿರ್ಮಾಣಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಬಳಿಕ ಪಿಡಿಒಗಳು ಮನೆಗಳಿಗೆ ತೆರಳಿ ಪರಿಶೀಲಿಸಿ, ಅರ್ಹರಿಗೆ ಶೌಚಾಲಯ ನಿರ್ಮಿಸಿಕೊಡಲಾಗುವುದು. ಆದರೆ ಶೌಚಾಲಯಗಳ ನಿರ್ಮಾಣದ ಜತೆಗೆ ಅದರ ಬಳಕೆ ಮಾಡುವಂತೆ ಮಾಡುವುದು ಸವಾಲಿನ ಸಂಗತಿಯಾಗಿದೆ ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯ ಇದ್ದರೂ ಸಹ ಅದರ ಬಳಕೆಯ ಕಡಿಮೆ ಇದೆ. ಇದಕ್ಕೆ ನೀರಿನ ಸಮಸ್ಯೆ ಮುಖ್ಯ ಕಾರಣವಾಗಿದ್ದು, ಈ ಬಗ್ಗೆ ಅರಿವು ಮೂಡಿಸಿದರೆ ಅದರ ಬಳಕೆ ಪ್ರಮಾಣ ಹೆಚ್ಚಲಿದೆ. ಗ್ರಾಮೀಣ ಪ್ರದೇಶದಲ್ಲಿ 8ನೇ ತರಗತಿ ನಂತರದಲ್ಲಿ ಬಹುತೇಕ ಹೆಣ್ಣುಮಕ್ಕಳು
ಮನರೇಗಾ ಮೂಲಕ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಮಾಡುವ ಕೆಲಸ ಮಾಡಲಾಗುತ್ತಿದೆ. ಬಿಇಒಗಳು ಶೌಚಾಲಯದಲ್ಲಿ ಸಮಸ್ಯೆ ಇದ್ದರೆ ಅದರ ಸರ್ವೇ ನಡೆಸಿ ಮಾಹಿತಿ ನೀಡಿದರೆ ಶೌಚಾಲಯ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು.ಇದಲ್ಲದೇ ಆರೋಗ್ಯ ಇಲಾಖೆ ಮೂಲಕ ಬಯಲ ಶೌಚಾಲಯ ಬಳಿಕೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಬೇಕು, ಶೌಚಾಲಯದ ಸ್ವಚ್ಛತೆ ಕಾಪಾಡುವ ಬಗ್ಗೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ನೆರವಿನೊಂದಿಗೆ ಅರಿವು ಮೂಡಿಸಬೇಕು. ಮಹಿಳಾ ಮತ್ತು ಮಕ್ಕಳ ಇಲಾಖೆ ಮೂಲಕ ಮಹಿಳೆಯರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳಾದ ಲಕ್ಷ್ಮೀಕಾಂತ ರೆಡ್ಡಿ ಅವರು ಉದ್ಘಾಟಿಸಿದರು.
ನಂತರ ಶೌಚಾಲಯದ ಬಳಕೆ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆ ಕುರಿತಂತೆ ಪ್ರತಿಜ್ಞಾವಿಧಿ ಬೋಧಿಸಿದರು
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣರಾಜು, ಹಿರಿಯ ಪತ್ರಕರ್ತರಾದ ಸಿ.ಕೆ.ಮಹೇಂದ್ರ ಹಾಗೂ ಸೇರಿದಂತೆ ಇತರ ಅಧಿಕಾರಿಗಳು, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.