ಮನೆ ರಾಜ್ಯ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು – ತನಿಖಾ ತಂಡಕ್ಕೆ ಬಹುಮಾನ ಘೋಷಣೆ

ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು – ತನಿಖಾ ತಂಡಕ್ಕೆ ಬಹುಮಾನ ಘೋಷಣೆ

0

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ.

ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ಪೆಕ್ಟರ್‌ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ, ಸುಮಾರಾಣಿ, ಹೇಮಂತ್ ಕುಮಾರ್ ಸೇರಿದಂತೆ 30 ಮಂದಿ ಅಧಿಕಾರಿಗಳು, ಸಿಬ್ಬಂದಿಗೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ.

ಪೊಲೀಸ್ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗೆ ಸರ್ಕಾರದಿಂದ ವಿವಿಧ ದರ್ಜೆ ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಮಂಜೂರು ಮಾಡಲಾಗಿದೆ. ಒಟ್ಟಾರೆ 35 ಲಕ್ಷ ರೂ. ಬಹುಮಾನವನ್ನು ಪೊಲೀಸ್ ಇಲಾಖೆ ಘೋಷಿಸಿದೆ.