ಮೈಸೂರು: ಮೈಸೂರಿನಲ್ಲಿ ಕ್ರೈಮ್ ರೇಟ್ ಕಡಿಮೆಯಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ತಿಳಿಸಿದರು.
ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಬಳಿ ಇಂದು ಬೆಳಿಗ್ಗೆ ಪೊಲೀಸ್ ಆಯುಕ್ತರು ಅಪರಾಧ ತಡೆ ಮಾಸಾಚರಣೆ 2023 ಕಾರ್ಯಕ್ರಮ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೈಸೂರಿನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ, ಚೈನ್ಸ್ ಸ್ನ್ಯಾಚಿಂಗ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಈ ವರ್ಷದಲ್ಲಿ ನಡೆದಿರುವ ಚೈನ್ಸ್ ಸ್ನ್ಯಾಚಿಂಗ್ ಪ್ರಕರಣಗಳ ಪೈಕಿ ಎಂಟು ಪ್ರಕರಣಗಳನ್ನು ಈಗಾಗಲೇ ಪತ್ತೆಹಚ್ಚಲಾಗಿದೆ. ಉಳಿದ ಪ್ರಕರಣಗಳನ್ನು ಅತಿ ಶೀಘ್ರದಲ್ಲೇ ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಲಾಗುವುದು ಎಂದವರು ಈ ಸಂದರ್ಭದಲ್ಲಿ ತಿಳಿಸಿದರು.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮೈಸೂರಿನಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದವರು ಹೇಳಿದರು.
ಇಂದಿನ ಕಾರ್ಯಕ್ರಮದಲ್ಲಿ ಡಿಸಿಪಿಗಳಾದ ಮುತ್ತುರಾಜ್, ಶೈಲೇಂದ್ರ, ಜಿಲ್ಲಾಧಿಕಾರಿಗಳಾದ ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಾಯತ್ರಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.