ಮನೆ ರಾಜ್ಯ 16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ, ಅಪರಾಧಿ ಬಂಧನ..!

16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ, ಅಪರಾಧಿ ಬಂಧನ..!

0

ಚಾಮರಾಜನಗರ : ಅಪಘಾತ ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ 1 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಹದಿನಾರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಅಪರಾಧಿಯನ್ನ ಚಾಮರಾಜನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ನಂಜನಗೂಡು ಪಟ್ಟಣ ನೀಲಕಂಠ ನಗರದ ಸಫಿ ಬಿನ್ ಸೈಯದ್ ಮಹಮ್ಮದ್ ಎಂಬ ಆಟೋ ಚಾಲಕ 2010 ರಿಂದ ಪೊಲೀಸರ ಕೈಗೂ ಸಿಗದೆ, ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದನು.

ಸಫಿಗೆ ಅಪಘಾತ ಪ್ರಕರಣವೊಂದರಲ್ಲಿ ಚಾಮರಾಜನಗರ ಜೆಎಂಎಫ್‌ಸಿ ನ್ಯಾಯಾಲಯ 2010 ರಲ್ಲಿ 1 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ಅಂದಿನಿಂದಲು ತಲೆ ಮರೆಸಿಕೊಂಡಿದ್ದ ಸಫಿಯನ್ನ ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ ಎನ್ನಲಾಗಿದೆ.