ಮನೆ ರಾಜ್ಯ ಕೋಟಿ ಹಣ, ಚಿನ್ನಾಭರಣ ದೋಚಿದ – ಸರ್ಕಾರಿ ಅಧಿಕಾರಿಗಳು

ಕೋಟಿ ಹಣ, ಚಿನ್ನಾಭರಣ ದೋಚಿದ – ಸರ್ಕಾರಿ ಅಧಿಕಾರಿಗಳು

0

ಬೆಂಗಳೂರು : ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ಬಂದು ಮನೆಯಲ್ಲಿದ್ದ ಒಂದೂವರೆ ಕೋಟಿ ರೂ. ಹಣ ಹಾಗೂ 50 ಗ್ರಾಂನ ಚಿನ್ನಾಭರಣಗಳನ್ನು ಖದೀಮರು ಲಪಟಾಯಿಸಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.

ಯಲಹಂಕ ನಿವಾಸಿ ಗಿರಿರಾಜು ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು ಇನ್ನೋವಾ ಕಾರಿನಲ್ಲಿ ಬಂದಿದ್ದ ನಾಲ್ವರು ಆರೋಪಿಗಳು, ನಾವು ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡಿದ್ದರು.

ಬಳಿಕ ನಿಮ್ಮ ಮನೆಯಲ್ಲಿ ಹಣ ಇದೆ ಎಂದು ಗಿರಿರಾಜು ಮನೆಯವರ ಹೇಳಿದ್ದರು. ಹಣ ಎಲ್ಲಿದೆ ಎಂದು ಕೇಳಿದ್ದರು. ಜಮೀನು ಖರೀದಿಗಾಗಿ ಗಿರಿರಾಜು ಅವರು ಒಂದೂವರೆ ಕೋಟಿ ರೂ. ಹಣವನ್ನು ತಂದು ಮನೆಯಲ್ಲಿಟ್ಟಿದ್ದರು. ಅಡುಗೆ ಮನೆಯಲ್ಲಿಟ್ಟಿದ್ದ ಹಣವನ್ನು ಖದೀಮರು ತೆಗೆದುಕೊಂಡಿದ್ದರು.

ಮನೆಯವರ ಬಳಿ ಗಿರಿರಾಜು ಎಲ್ಲಿದ್ದಾರೆ ಎಂದು ಕೇಳಿದ್ದರು. ಅವರು ಇಲ್ಲ ಎಂದಾಗ ಹಣದ ಬ್ಯಾಗ್ ಮತ್ತು 50 ಗ್ರಾಂ ಚಿನ್ನಾಭರಣವನ್ನು ದೋಚಿ ನಾಲ್ವರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ.

ಇದೀಗ ಘಟನೆ ಕುರಿತು ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲಿಸಿ, ತನಿಖೆ ನಡೆಸುತ್ತಿದ್ದಾರೆ.