ಮನೆ ಅಪರಾಧ ನಿಂತಿದ್ದ ಲಾರಿಗೆ ಕ್ರೂಸರ್ ಢಿಕ್ಕಿ: ಐದು ಮಂದಿ ಮೃತ್ಯು

ನಿಂತಿದ್ದ ಲಾರಿಗೆ ಕ್ರೂಸರ್ ಢಿಕ್ಕಿ: ಐದು ಮಂದಿ ಮೃತ್ಯು

0

ಸೈದಾಪುರ: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ ಹೊಡೆದ ಪರಿಣಾಮ ಐದು ಮಂದಿ ಸ್ಥಳದಲ್ಲೇ ಮೃತಪಟ್ಟು, 13 ಮಂದಿ ಗಾಯಗೊಂಡ ಘಟನೆ ಯಾದಗಿರಿ ತಾಲೂಕಿನ ಬಳಿ ಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (a) ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

Join Our Whatsapp Group

ಗಾಯಗೊಂಡ 13 ಜನರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇವರೆಲ್ಲರೂ ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ ದರ್ಗಾದ ಉರುಸ್ ಜಾತ್ರೆಗೆ ತೆರಳುತ್ತಿದ್ದರು. ಈ ವೇಳೆ ಬಳಿಚಕ್ರ ಎಂಬ ಪ್ರದೇಶದ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ಕ್ರೂಷರ್ ಢಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಹಿಂದಿನ ಲೇಖನನಿಮ್ಹಾನ್ಸ್ ನಲ್ಲಿ ಕೆಲಸ ಖಾಲಿ ಇದೆ: ಇಂದೇ ಅರ್ಜಿ ಸಲ್ಲಿಸಿ
ಮುಂದಿನ ಲೇಖನಮಂಗಳೂರು ಜಿಲ್ಲಾ ಮಟ್ಟದ ಬಿಜೆಪಿ ಸಭೆಯಲ್ಲಿ ನಳಿನ್ ಕುಮಾರ್ ಕಟೀಲ್ ಪರ ಬಿ.ಎಲ್.ಸಂತೋಷ್ ಬ್ಯಾಟಿಂಗ್