ಐಪಿಎಲ್ 17 ನೇ ಸೀಸನ್ ಇಂದಿನಿಂದ ಪ್ರಾರಂಭವಾಗಿದೆ. ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯುತ್ತಿದ್ದು, ಈ ಪಂದ್ಯಕ್ಕೆ ಎಂ ಚಿದಂಬರಂ ಸ್ಟೇಡಿಯಂ ಆತಿಥ್ಯವಹಿಸುತ್ತಿದೆ.
ಸಿಎಸ್ ಕೆ ದಾಖಲೆಯ ಒಂಬತ್ತನೇ ಬಾರಿಗೆ ಐಪಿಎಲ್‌ನ ಆರಂಭಿಕ ಪಂದ್ಯವನ್ನು ಆಡುತ್ತಿದೆ. ಅದೇ ಸಮಯದಲ್ಲಿ, ಆರ್ ಸಿಬಿ ಐದನೇ ಬಾರಿಗೆ ಸೀಸನ್ ನ ಮೊದಲ ಪಂದ್ಯವನ್ನು ಆಡುತ್ತಿದೆ.
ಚೆನ್ನೈ ಸೂಪರ್ ಕಿಂಗ್ಸ್ ಯಾವಾಗಲೂ ಆರ್‌ಸಿಬಿ ವಿರುದ್ಧ ತವರಿನಲ್ಲಿ ಪ್ರಾಬಲ್ಯ ಹೊಂದಿದೆ. ಉಭಯ ತಂಡಗಳ ನಡುವೆ ನಡೆದ ಪಂದ್ಯಗಳ ಅಂಕಿಅಂಶಗಳೇ ಇದಕ್ಕೆ ಸಾಕ್ಷಿ. ಚೆನ್ನೈನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್ ಕೆ ಮತ್ತು ಆರ್‌ಸಿ ಬಿ ನಡುವೆ ಇದುವರೆಗೆ ಎಂಟು ಪಂದ್ಯಗಳು ನಡೆದಿವೆ.
ಇದರಲ್ಲಿ ಹಾಲಿ ಚಾಂಪಿಯನ್ ಏಳು ಪಂದ್ಯಗಳನ್ನು ಗೆದ್ದಿದ್ದರೆ, ಆರ್‌ಸಿಬಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಹೀಗಾಗಿ ಇಂದಿನ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸದೆ.
ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಆರ್ ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.