ಮನೆ ರಾಜ್ಯ ಯುವ ಬ್ರಿಗೇಡ್​​ ಕಾರ್ಯಕರ್ತನ ಕುಟುಂಬಕ್ಕೆ ಸಿ.ಟಿ ರವಿ ಸಾಂತ್ವಾನ

ಯುವ ಬ್ರಿಗೇಡ್​​ ಕಾರ್ಯಕರ್ತನ ಕುಟುಂಬಕ್ಕೆ ಸಿ.ಟಿ ರವಿ ಸಾಂತ್ವಾನ

0

ಮೈಸೂರು: ​ ಸಿಟಿ ರವಿ ನೇತೃತ್ವದ ಬಿಜೆಪಿ ಸತ್ಯಶೋಧನಾ ತಂಡ ಯುವ ಬ್ರಿಗೇಡ್​​ ಕಾರ್ಯಕರ್ತ ವೇಣುಗೋಪಾಲ ನಾಯಕ್ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಮೃತನ ಪತ್ನಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿತು.

Join Our Whatsapp Group

ವೇಣುಗೋಪಾಲ್​​ ಪತ್ನಿಗೆ ಸಿಟಿ ರವಿ 5 ಲಕ್ಷ ರೂಪಾಯಿ ಚೆಕ್ ನೀಡಿದರು.

ನಂತರ ಮಾತನಾಡಿದ ಅವರು, ಇದೊಂದು ಪೂರ್ವನಿಯೋಜಿತ ಹತ್ಯೆ. 30 ಕಡೆ ಇರಿದಿದ್ದಾರೆ. ಶಸ್ತ್ರಾಸ್ತ್ರ ಬಳಸಿ ಕೊಲೆ ಮಾಡಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಇದುವರೆಗೂ ರಾಜ್ಯದ 16-17 ಕಡೆ ಈ ರೀತಿ ಘಟನೆಗಳು ನಡೆದಿವೆ ಎಂದು ದೂರಿದರು.

ವೇಣುಗೋಪಾಲ ನಾಯಕ್ ಹನುಮ‌ ಜಯಂತಿ ನೇತೃತ್ವವಹಿಸಿದ್ದ ಕಾರಣ ಈ ಕೊಲೆಯಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಒಂದು ವರ್ಗದ ಜನ ಯುದ್ಧೋತ್ಸಹದಲ್ಲಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅರಾಜಕತೆ ಸ್ಥಿತಿ ಸೃಷ್ಟಿಯಾಗಿದೆ ಎಂದರು.

ಈ ಕ್ಷೇತ್ರದ ಶಾಸಕ ಡಾ. ಮಹದೇವಪ್ಪ ಕಡೆಯಿಂದ ಈ ಕುಟುಂಬಕ್ಕೆ ಒಂದು ಸಾಂತ್ವನದ ನುಡಿ ಕೂಡ ಬಂದಿಲ್ಲ. ಮುಖ್ಯಮಂತ್ರಿ ಕಡೆಯಿಂದಲ್ಲೂ ಸಾಂತ್ವನ ಬಂದಿಲ್ಲ. ಮುಖ್ಯಮಂತ್ರಿಗಳು ಈ ಹತ್ಯೆ ಬಗ್ಗೆ ತುಟಿ ಬಿಚ್ಚಿಲ್ಲ. ಸಿದ್ದರಾಮಯ್ಯ ಅವರಿಗೆ ಕೇಸರಿ ಕಂಡರೆ ಆಗದ ಮಾನಸಿಕತೆ ಇದೆ. ವೇಣುಗೋಪಾಲ ನಾಯಕ, ಕೇಸರಿಯ ನೇತೃತ್ವವಹಿಸಿ ಕೊಂಡವರಾದ ಕಾರಣ ಸಾಂತ್ವನ ಹೇಳಿಲ್ಲ ಎಂದು ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವರಾದ ಡಾ. ಸಿಎನ್ ಅಶ್ವತ್ಥನಾರಾಯಣ, ಎನ್ ಮಹೇಶ್​​, ಶಾಸಕ ಶ್ರೀವತ್ಸ, ಮಾಜಿ ಎಂಎಲ್​ಸಿ ಮಲ್ಲಿಕಾರ್ಜುನಪ್ಪ ಬಿಜೆಪಿ ತಂಡದ ಜತೆಗಿದ್ದರು. ಸಂಸದ ಪ್ರತಾಪ್ ಸಿಂಹ ಹಾಜರಿರಲಿಲ್ಲ.

ಮಹದೇವಪ್ಪ ಪುತ್ರ ಸುನೀಲ್ ಬೋಸ್ ಭೇಟಿ

ಮೃತ ವೇಣುಗೋಪಾಲ್ ನಿವಾಸಕ್ಕೆ ಸಮಾಜಕಲ್ಯಾಣ ಸಚಿವ ಹೆಚ್​​ಸಿ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ವೈಯಕ್ತಿಕವಾಗಿ ಕುಟುಂಬಕ್ಕೆ ಧನಸಹಾಯ ಮಾಡಿದ್ದಾರೆ.

ಹಿಂದಿನ ಲೇಖನಜಮ್ಮು-ಕಾಶ್ಮೀರ 370ನೇ ವಿಧಿ ರದ್ದು ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ: ಆಗಸ್ಟ್ 2ರಿಂದ ವಿಚಾರಣೆ
ಮುಂದಿನ ಲೇಖನತನ್ನ ಪತಿ ಪಾಲಿನ ಆಸ್ತಿ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ